ಹೊಸದಿಲ್ಲಿ: 76ನೇ ಗಣರಾಜ್ಯೋತ್ಸದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿರುವ ಅವರು, ಇಂದು ನಾವು ಗಣರಾಜ್ಯವಾಗಿ 76 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ. ಸಂವಿಧಾನದ ಘನತೆ ಏಕತೆಯು ನಮ್ಮಲ್ಲಿ ಬೇರೂರಿದೆ. ಎಲ್ಲ ಮಹಾನ್ ಪುರುಷರು ಹಾಗೂ ಮಹಿಳೆಯರಿಗೆ ನಾವು ನಮಸ್ಕರಿಸುತ್ತೇವೆ ಎಂದು ಹೇಳಿದ್ದಾರೆ.
ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಮತ್ತು ಬಲಿಷ್ಠ ಹಾಗೂ ಸಮೃದ್ಧ ದೇಶಕ್ಕಾಗಿ ಕೆಲಸ ಮಾಡುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ ಎಂದು ಅವರು ಶುಭಾಶಯ ಕೋರಿದ್ದಾರೆ.