ನವದೆಹಲಿ: ಜನವರಿ 26 ರಂದು ಗಣರಾಜೋತ್ಸವ ಪ್ರಯುಕ್ತ ಅಂದಿನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಭಾಗವಹಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ.
ಮುಂಬರುವ ಗಣರಾಜೋತ್ಸವವನ್ನು ದೆಹಲಿಯ ಕೆಂಪು ಕೋಟೆಯಲ್ಲಿ ಈ ಬಾರಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರನ್ನು ಆಹ್ವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಅವರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂಡೋನೇಷ್ಯಾ ಮತ್ತು ಭಾರತದ ನಡುವಿನ ಆಂತರಿಕ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರಬೊವೊ ಸುಬಿಯಾಂಟೊ(73) ಅವರು 2024ರ ಅಕ್ಟೋಬರ್ ತಿಂಗಳಿನಲ್ಲಿ ಇಂಡೋನೇಷ್ಯಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಇವರು ಅಧ್ಯಕ್ಷರಾಗಿ ಆಯ್ಕೆಯಾಗುವ ಮುನ್ನ ಈ ದೇಶದಲ್ಲಿ ಮಾಜಿ ಸೇನಾ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದರು.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…