ದೇಶ- ವಿದೇಶ

ಗಣರಾಜ್ಯೋತ್ಸವ: ಈ ಬಾರಿ ಇಂಡೋನೇಷ್ಯಾ ಅಧ್ಯಕ್ಷ ಮುಖ್ಯ ಅತಿಥಿಯಾಗುವ ಸಾಧ್ಯತೆ

ನವದೆಹಲಿ: ಜನವರಿ 26 ರಂದು ಗಣರಾಜೋತ್ಸವ ಪ್ರಯುಕ್ತ ಅಂದಿನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಭಾಗವಹಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ.

ಮುಂಬರುವ ಗಣರಾಜೋತ್ಸವವನ್ನು ದೆಹಲಿಯ ಕೆಂಪು ಕೋಟೆಯಲ್ಲಿ ಈ ಬಾರಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರನ್ನು ಆಹ್ವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಅವರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂಡೋನೇಷ್ಯಾ ಮತ್ತು ಭಾರತದ ನಡುವಿನ ಆಂತರಿಕ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಪ್ರಬೊವೊ ಸುಬಿಯಾಂಟೊ(73) ಅವರು 2024ರ ಅಕ್ಟೋಬರ್‌ ತಿಂಗಳಿನಲ್ಲಿ ಇಂಡೋನೇಷ್ಯಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಇವರು ಅಧ್ಯಕ್ಷರಾಗಿ ಆಯ್ಕೆಯಾಗುವ ಮುನ್ನ ಈ ದೇಶದಲ್ಲಿ ಮಾಜಿ ಸೇನಾ ಜನರಲ್‌ ಆಗಿ ಕಾರ್ಯ ನಿರ್ವಹಿಸಿದ್ದರು.

 

ಅರ್ಚನ ಎಸ್‌ ಎಸ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

3 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

3 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

4 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

4 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

4 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

4 hours ago