ದೇಶ- ವಿದೇಶ

ಮತ್ತೊಂದು ಆಘಾತ ; ಪಾಕ್‌ ಪತನ ಶೀಘ್ರ ; ಬಲೂಚಿಸ್ತಾನ ಉದಯ

ಇಸ್ಲಮಾಬಾದ್‌ : ಪಾಕಿಸ್ತಾನದಿಂದ ಪ್ರತ್ಯೇಕಗೊಂಡು ರಿಪಬ್ಲಿಕ್‌ ಆಫ್‌ ಬಲೂಚಿಸ್ತಾನ್‌ ರಚನೆಗೊಂಡಿದೆ ಎಂದು ಬಲೂಚಿಸ್ತಾನ ನಾಯಕ ಮೀರ್‌ ಯಾರ್‌ ಸೇರಿದಂತೆ ಕೆಲ ನಾಯಕರು ಎಕ್ಸ್‌ನಲ್ಲಿ ಘೋಷಿಸಿದ್ದು, ಈ ವಿಚಾರವೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಈ ಪ್ರದೇಶದಲ್ಲಿ ದಶಕಗಳ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ತುಮ್ ಮಾರೋಗೆ ಹಮ್ ನೆಕ್ಲೆಂಗಿ, ಹಮ್ ನಸಲ್ ಬಚಾನಿ ನೆಕ್ಲಿ ಹೈ, ಆವೋ ಹಮಾರಾ ಸಾಥ್ ದೋ ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನ್‍ನಾದ್ಯಂತ ಸಾರ್ವಜನಿಕರು ಬೀದಿಗಿಳಿದಿದ್ದಾರೆ. ಇದು ಬಲೂಚಿಸ್ತಾನ್ ಪಾಕಿಸ್ತಾನವಲ್ಲ. ಜಗತ್ತು ಇನ್ನು ಮುಂದೆ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ. ಭಾರತೀಯ ನಾಗರಿಕರು, ವಿಶೇಷವಾಗಿ ಮಾಧ್ಯಮಗಳು, ಯೂಟ್ಯೂಬರ್‍ಗಳು ಮತ್ತು ಬುದ್ಧಿಜೀವಿಗಳು ಬಲೂಚಿಸ್ತಾನ್‍ಗಳನ್ನು ಪಾಕಿಸ್ತಾನದ ಸ್ವಂತ ಜನರು ಎಂದು ಕರೆಯುವುದನ್ನು ನಿಲ್ಲಿಸುವಂತೆ ಅವರು ಇದೇ ವೇಳೆ ಒತ್ತಾಯಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಅವರು ಹೇ ನಾ-ಪಾಕಿಸ್ತಾನ್. ನಿಮ್ಮ ಬಳಿ ಸೈನ್ಯವಿದ್ದರೆ, ನಾವು ಬಲೂಚ್‍ನ ಸ್ವತಂತ್ರ ಯೋಧರಿದ್ದಾರೆ. ಈ ಯೋಧರು ನಿಮ್ಮ ವಿರುದ್ಧ ಹೋರಾಟ ಮಾಡುತ್ತಾರೆ ಎಂದು ಎಚ್ಚರಿಕೆಯ ಬರಹ ಪೋಸ್ಟ್ ಮಾಡಿದ್ದಾರೆ. ಇತ್ತೀಚಿನ ಗಡಿಯಾಚೆಗಿನ ಮಿಲಿಟರಿ ಕಾರ್ಯಾಚರಣೆಗಳ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾದ ನಡುವೆ ಈ ಘೋಷಣೆ ಬಂದಿದೆ.

ಅಲ್ಲದೇ ಹೊಸದಿಲ್ಲಿಯಲ್ಲಿ ಬಲೂಚಿಸ್ತಾನದ ರಾಯಭಾರ ಕಚೇರಿಗೆ ಅವಕಾಶ ನೀಡುವಂತೆ ಅವರು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪಾಕಿಸ್ತಾನಿ ಸೈನ್ಯವನ್ನು ಬಲೂಚಿಸ್ತಾನದಿಂದ ಕಳುಹಿಸಿ, ಶಾಂತಿಪಾಲನಾ ಪಡೆಗಳನ್ನು ಕಳುಹಿಸುವಂತೆ ವಿಶ್ವಸಂಸ್ಥೆಯನ್ನು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

10 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

13 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

14 hours ago