Mysore
20
overcast clouds
Light
Dark

ಸಿಎಂ ಸ್ಥಾನಕ್ಕೆ ಅರವಿಂದ್‌ ಕೇಜ್ರಿವಾಲ್‌ ರಾಜೀನಾಮೆ: ಜೈಲಿನಿಂದ ಹೊರಬಂದ ಬಳಿಕ ಘೋಷಣೆ

ನವದೆಹಲಿ: ಭ್ರಷ್ಟಾಚಾರ ಹಗರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಜೈಲಿನಿಂದ ಹೊರಬಂದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು, ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣ ಪತ್ರ ನೀಡಬೇಕು. ಆಗ ಮಾತ್ರ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದರು.

ದೆಹಲಿ ಚುನಾವಣೆ 2025ರ ಫೆಬ್ರವರಿಯಲ್ಲಿ ನಡೆಯಲಿದೆ. ಆದರೆ ಮಹಾರಾಷ್ಟ್ರದೊಂದಿಗೆ 2024ರ ನವೆಂಬರ್‌ನಲ್ಲಿಯೇ ಚುನಾವಣೆ ನಡೆಸಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದರು.

ಇನ್ನೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸುತ್ತೇನೆ. ಪಕ್ಷದ ನಾಯಕರೊಬ್ಬರು ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದರು.

ಅರವಿಂದ್‌ ಕೇಜ್ರಿವಾಲ್‌ ಅವರ ರಾಜೀನಾಮೆ ಹೇಳಿಕೆ ಕಾರ್ಯಕರ್ತರಲ್ಲಿ ಭಾರೀ ಅಚ್ಚರಿ ಮೂಡಿಸಿದ್ದು, ಯಾರೂ ಸಿಎಂ ಆಗುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.