ನವದೆಹಲಿ: ಭ್ರಷ್ಟಾಚಾರ ಹಗರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣ ಪತ್ರ ನೀಡಬೇಕು. ಆಗ ಮಾತ್ರ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದರು.
ದೆಹಲಿ ಚುನಾವಣೆ 2025ರ ಫೆಬ್ರವರಿಯಲ್ಲಿ ನಡೆಯಲಿದೆ. ಆದರೆ ಮಹಾರಾಷ್ಟ್ರದೊಂದಿಗೆ 2024ರ ನವೆಂಬರ್‌ನಲ್ಲಿಯೇ ಚುನಾವಣೆ ನಡೆಸಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದರು.
ಇನ್ನೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸುತ್ತೇನೆ. ಪಕ್ಷದ ನಾಯಕರೊಬ್ಬರು ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದರು.
ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆ ಹೇಳಿಕೆ ಕಾರ್ಯಕರ್ತರಲ್ಲಿ ಭಾರೀ ಅಚ್ಚರಿ ಮೂಡಿಸಿದ್ದು, ಯಾರೂ ಸಿಎಂ ಆಗುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…