ನವದೆಹಲಿ: ರಾಷ್ಟ್ರದ ಪ್ರಮುಖ ಟ್ರಾವೆಲ್ ಬುಕ್ಕಿಂಗ್ ಕಂಪೆನಿ ಓಯೊ ತನ್ನ ಚೆಕ್ ಇನ್ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಅವಿವಾಹಿತ ಜೋಡಿಗಳಿಗೆ ಅವಕಾಶವಿಲ್ಲ ಎಂದು ಹೇಳಿದೆ.
ಈ ನೂತನ ನಿಯಮ ಸದ್ಯ ಮೀರತ್‌ನಲ್ಲಿ ಈ ನಿಯಮ ಜಾರಿಯಾಗಿದ್ದು, ಹೋಟೆಲ್‌ಗೆ ಬರುವ ಜೋಡಿಗಳು ಕಡ್ಡಾಯವಾಗಿ ತಮ್ಮ ಸಂಬಂಧದ ಪುರಾವೆಯನ್ನು ಒದಗಿಸಬೇಕು. ಅಲ್ಲದೇ ಆನ್‌ಲೈನ್ ಬುಕ್ಕಿಂಗ್‌ಗೂ ಈ ನಿಯಮ ಅಳವಡಿಕೆಯಾಗಲಿದೆ ಎಂದು ತಿಳಿಸಿದೆ.
ಓಯೊ ಕಂಪೆನಿ ತನ್ನ ಎಲ್ಲಾ ಪಾಲುದಾರ ಹೋಟೆಲ್‌ಗಳಿಗೆ ಈ ಮಾಹಿತಿಯನ್ನು ರವಾನಿಸಿದೆ. ತಕ್ಷಣವೇ ಇದನ್ನು ಜಾರಿಗೆ ತರಬೇಕು ಎಂದು ಮೀರತ್‌ನ ಪಾಲುದಾರ ಹೋಟೆಲ್‌ಗಳಿಗೆ ಕಂಪೆನಿ ಸೂಚನೆ ನೀಡಿದೆ. ಹೀಗಾಗಿ ಓಯೊ ಸುರಕ್ಷಿತ ಹಾಗೂ ಜವಾಬ್ದಾರಿಯುತ ಅತಿಥ್ಯ ಪದ್ಧತಿಗಳನ್ನು ಎತ್ತಿ ಹಿಡಿಯಲಾಗಿದೆ ಎಂದು ಹೇಳಿದೆ.
ಸ್ಥಳಿಯ ಸಾಮಾಜಿಕ ಸಂವೇದನೆಯನ್ನು ಗೌರವಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದು, ಆಯಾಯ ನಗರದ ಪ್ರತಿಕ್ರಿಯೆ ಪಡೆದು ಬೇರೆ ಸ್ಥಳಗಳಿಗೂ ಈ ನಿಯಮವನ್ನು ವಿಸ್ತರಿಸುವ ಬಗ್ಗೆ ಚಿಂತಿಸಲಾಗುವುದು ಎಂದು ಅಧಿಕಾರಿ ಮೂಲಗಳು ತಿಳಿಸಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…