Mysore
18
broken clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಆರ್‌.ಜಿ.ಕರ್‌ ಪ್ರಕರಣ: ಸಂಜಯ್‌ ರಾಯ್‌ಗೆ ಗಲ್ಲು ಶಿಕ್ಷೆ ಕೋರಿ ಹೈಕೋರ್ಟ್‌ಗೆ ಸಲ್ಲಿಕೆ: ಸಿಬಿಐ

ಕೋಲ್ಕತ್ತ: ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಆತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಂಜಯ್‌ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ ಕೋಲ್ಕತ್ತ ಹೈಕೋರ್ಟ್‌ಗೆ ಸಿಬಿಐ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ಇಂದು(ಜನವರಿ.24) ವಿಚಾರಣೆ ನಡೆಸಿದ ಹೈಕೋರ್ಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ದೇಬಾಂಗ್ಶು ಬಸಕ್‌ ಹಾಗೂ ಮೊಹಮ್ಮದ್‌ ಶಬ್ಬರ್‌ ರಶಿದಿ ಅವರಿದ್ದ ಪೀಠವೂ ಈ ಅರ್ಜಿ ವಿಚಾರಣೆಯನ್ನು ಜ.27ಕ್ಕೆ ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಇನ್ನೂ ಪಶ್ಚಿಮ ಬಂಗಾಳ ಸರ್ಕಾರವೂ ಇಂತಹದ್ದೇ ಒಂದು ಮನವಿಯನ್ನು ಸಲ್ಲಿಸಿದ್ದು, ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟಿಗೆ ವಿಚಾರಣೆ ನಡೆಸುವುದಾಗಿ ಹೇಳಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿದ ನಮಗೆ, ವಿಧಿಸಿದ ಶಿಕ್ಷೆಯ ಅಸಮರ್ಪಕತೆಯ ಆಧಾರದ ಮೇಲೆ ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಹಕ್ಕಿದೆ ಎಂದು ಹೇಳಿದೆ.

Tags: