ಕೋಲ್ಕತ್ತ: ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಆತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಂಜಯ್ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ ಕೋಲ್ಕತ್ತ ಹೈಕೋರ್ಟ್‌ಗೆ ಸಿಬಿಐ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯನ್ನು ಇಂದು(ಜನವರಿ.24) ವಿಚಾರಣೆ ನಡೆಸಿದ ಹೈಕೋರ್ಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ದೇಬಾಂಗ್ಶು ಬಸಕ್ ಹಾಗೂ ಮೊಹಮ್ಮದ್ ಶಬ್ಬರ್ ರಶಿದಿ ಅವರಿದ್ದ ಪೀಠವೂ ಈ ಅರ್ಜಿ ವಿಚಾರಣೆಯನ್ನು ಜ.27ಕ್ಕೆ ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.
ಇನ್ನೂ ಪಶ್ಚಿಮ ಬಂಗಾಳ ಸರ್ಕಾರವೂ ಇಂತಹದ್ದೇ ಒಂದು ಮನವಿಯನ್ನು ಸಲ್ಲಿಸಿದ್ದು, ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟಿಗೆ ವಿಚಾರಣೆ ನಡೆಸುವುದಾಗಿ ಹೇಳಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿದ ನಮಗೆ, ವಿಧಿಸಿದ ಶಿಕ್ಷೆಯ ಅಸಮರ್ಪಕತೆಯ ಆಧಾರದ ಮೇಲೆ ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಹಕ್ಕಿದೆ ಎಂದು ಹೇಳಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…