ಹೊಸದಿಲ್ಲಿ: 2018-19 ಹಾಗೂ 2022-23ನೇ ಸಾಲಿನ ನಡುವೆ ಪತ್ತೆಹಚ್ಚಲಾದ 500ರೂ. ಮುಖಬೆಲೆಯ ನಕಲಿ ನೋಟುಗಳ ಸಂಖ್ಯೆಯಲ್ಲಿ ಶೇ.317ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರವು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ ದತ್ತಾಂಶದಲ್ಲಿ ಹೇಳಿದೆ.
2018-19 ನೇ ಸಾಲಿನಲ್ಲಿ 500 ರೂ ಮುಖಬೆಲೆಯ 2186.5 ಕೋಟಿ ನಕಲಿ ನೋಟುಗಳು ದೇಶದಾದ್ಯಂತ ಪತ್ತೆಯಾಗಿದ್ದವು. ಇದಕ್ಕೆ ಹೋಲಿಸಿದರೆ 2022-23 ನೇ ಸಾಲಿನಲ್ಲಿ 500 ರೂ ಮುಖಬೆಲೆಯ 9,111 ನಕಲಿ ನೋಟುಗಳು ದೇಶದಲ್ಲಿ ಪತ್ತೆಯಾಗಿದ್ದು, ಹಿಂದಿನ ಸಾಲಿಗೆ ಹೋಲಿಸಿದರೆ ಶೇ. 316.6 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸಹಾಯಕ ವಿತ್ತ ಸಚಿವ ಪಂಕಚ್ಚೌಧರಿ ಲೋಕಸಭೆಗೆ ತಿಳಿಸಿದರು.
ಈ ಕುರಿತು ಡಿಎಂಕೆ ಸಂಸದ ಟಿ. ಎಂ. ಸೆಲ್ವಗಣಪತಿ ಅವರು ಮಂಗಳವಾರ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಹಣಕಾಸು ಸಚಿವಾಲಯವು ಈ ದತ್ತಾಂಶಗಳನ್ನು ಬಹಿರಂಗಪಡಿಸಿದೆ.
ಆದರೆ 2023-24ನೇ ಸಾಲಿನಲ್ಲಿ 500 ರೂ ಮುಖಬೆಲೆಯ ನೋಟುಗಳ ಸಂಖ್ಯೆಯು 85,711ಕ್ಕೆ ಕುಸಿದಿದೆ ಎಂದು ಸಚಿವಾಲಯ ತಿಳಿಸಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…