ಮೈಸೂರು: ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಹರಿಯಾಣ ರೋಡ್ ವೇಸ್ ಸಾರಿಗೆ ಬಸ್ ಚಾಲಕ ಮತ್ತು ನಿರ್ವಾಹಕ ಮತ್ತು ಕೆಲವು ಸ್ಥಳೀಯರನ್ನು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಗೌರವಿಸಿ ಸನ್ಮಾನಿಸಿದ್ದಾರೆ.
ಕ್ರಿಕೆಟಿಗ ರಿಷಭ್ ಪಂತ್ ಡಿಸೆಂಬರ್ 30 ರಂದು ದೆಹಲಿಯಿಂದ ರೂರ್ಕಿಗೆ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತಕ್ಕೊಳಗಾದರು. ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿತ್ತು. ಬೆಂಕಿ ಹೊತ್ತಿಕೊಂಡಿದ್ದ ಕಾರಿನಿಂದ ಮುಂಭಾಗದ ಗಾಜು ಒಡೆದು ಪಂತ್ ಹೊರಗೆ ಬಂದಿದ್ದಾರೆ. ನಂತರ ರಸ್ತೆ ಪಕ್ಕದಲ್ಲಿ ಬಿದ್ದು ನೋವಿನಿಂದ ನರಳುತ್ತಿದ್ದ ಪಂತ್ ಅವರನ್ನು ಹರಿಯಾಣ ರೋಡ್ ವೇಸ್ ನ ಚಾಲಕ ಸುಶೀಲ್ ಕುಮಾರ್ ಮತ್ತು ನಿರ್ವಾಹಕ ಪರಮ್ಜಿತ್ ಸಿಂಗ್ ರಕ್ಷಿಸಿ ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದರು. ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಅವರು ಈ ಇಬ್ಬರನ್ನು ಕರೆದು ನಗದು ಪುರಸ್ಕಾರವಿತ್ತು ಗೌರವಿಸಿದ್ದಾರೆ.
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…