covid 19
ಅಮರಾವತಿ : ದೇಶ ಮತ್ತು ನೆರೆಯ ರಾಜ್ಯಗಳಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ, ವೈದ್ಯಕೀಯ ಶಿಕ್ಷಣ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಜನದಟ್ಟಣೆ ಸ್ಥಳಗಳಲ್ಲಿ ಮತ್ತು ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ರಾಜ್ಯದಲ್ಲಿ ಯಾವುದೇ ಕೊರೊನಾ ವೈರಸ್ ಪ್ರಕರಣಗಳಿಲ್ಲ. ಆದಾಗ್ಯೂ ದೇಶದಲ್ಲಿ 257 ಪ್ರಕರಣಗಳು ವರದಿಯಾಗಿರುವುದರಿಂದ ಅವುಗಳಲ್ಲಿ ಹೆಚ್ಚಿನವು ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ಬಂದಿರುವುದರಿಂದ, ಸಾರ್ವಜನಿಕರಿಗೆ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ಕೊಡಲಾಗಿದೆ.
ಯಾವುದೇ ವ್ಯಕ್ತಿಗೆ ಜ್ವರ, ಕೆಮ್ಮು, ಶೀತ, ಗಂಟಲು ನೋವು ಮುಂತಾದ ಲಕ್ಷಣಗಳು ಕಂಡುಬಂದರೆ, ಅವರು ಹತ್ತಿರದ ಆರೋಗ್ಯ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ಪ್ರಕರಣಗಳು ಹೆಚ್ಚುತ್ತಿರುವ ಸ್ಥಳಗಳಿಂದ ಹಿಂದಿರುಗಿದ ನಂತರ ಯಾರಾದರೂ ಈ ಲಕ್ಷಣಗಳನ್ನು ಅನುಭವಿಸಿದರೆ, ಅವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಅವರು ಒಂದು ವಾರ ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳಬೇಕು ಎಂದು ಸಲಹೆ ಮಾಡಲಾಗಿದೆ.
ಮಾಲ್‍ಗಳು, ಚಿತ್ರಮಂದಿರಗಳು, ಬಸ್ ಮತ್ತು ರೈಲ್ವೆ ನಿಲ್ದಾಣಗಳು ಸೇರಿದಂತೆ ಜನದಟ್ಟಣೆ ಇರುವ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಮತ್ತು ಆಗಾಗ್ಗೆ ಕೈ ತೊಳೆಯುವುದು ಒಳ್ಳೆಯದು. ಇತರ ಕಾಯಿಲೆಗಳಿಂದ ಬಳಲುತ್ತಿರುವ ಜನರು, ಗರ್ಭಿಣಿಯರು, ಐದು ವರ್ಷದೊಳಗಿನ ಮಕ್ಕಳು ಮತ್ತು ವೃದ್ಧರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವುದನ್ನು ಕಡಿಮೆ ಮಾಡಲು ಸೂಚಿಸಲಾಗಿದೆ.
ಏತನಧ್ಯೆ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶಕಿ ಕೆ.ಪದ್ಮಾವತಿ ವಿಶಾಖಪಟ್ಟಣದಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಲಕ್ಷಣವಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.
ವಿಶಾಖಪಟ್ಟಣದಲ್ಲಿ 23 ವರ್ಷದ ಮಹಿಳೆಗೆ ಮಲೇರಿಯಾ ಜೊತೆಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ನಮಗೆ ಮಾಹಿತಿ ಬಂದಿತು. ಆದರೆ ಪರೀಕ್ಷೆಗಳನ್ನು ಖಾಸಗಿ ಪ್ರಯೋಗಾಲಯ ನಡೆಸಿದೆ. ದೃಢೀಕರಣಕ್ಕಾಗಿ ನಾವು ಅವರ ಮಾದರಿಗಳನ್ನು ಸರ್ಕಾರಿ ಪ್ರಯೋಗಾಲಯಗಳಿಗೆ ಕಳುಹಿಸಿದ್ದೇವೆ. ಮಹಿಳೆ ಸ್ಥಿರವಾಗಿದ್ದಾರೆ. ಮಹಿಳೆಗೆ ಯಾವುದೇ ಪ್ರಯಾಣದ ಇತಿಹಾಸವಿಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಕೆಲವು ವಿಮಾನ ನಿಲ್ದಾಣಗಳಲ್ಲಿ ಪರೀಕ್ಷಾ ಕಿಟ್‍ಗಳ ವ್ಯವಸ್ಥೆ ಮಾಡಲಾಗಿದೆ ಮತ್ತು ಸಣ್ಣ ಪ್ರಮಾಣದಲ್ಲಿ ಸ್ಕ್ರೀನಿಂಗ್ ನಡೆಯುತ್ತಿದೆ. ಪ್ರಸ್ತುತ, ಪ್ರಕರಣಗಳು ಹೆಚ್ಚಿರುವ ಇತರ ರಾಜ್ಯಗಳಿಗೆ ಪ್ರಯಾಣಿಸಲು ಯಾವುದೇ ನಿರ್ಬಂಧಗಳಿಲ್ಲ. ಇತರ ರಾಜ್ಯಗಳಿಂದ ಬಂದಿರುವ ಮಾಹಿತಿಯ ಪ್ರಕಾರ, ಸೋಂಕುಗಳು ಸೌಮ್ಯ ಸ್ವಭಾವದ್ದಾಗಿದ್ದು, ಆತಂಕಪಡುವ ಅಗತ್ಯವಿಲ್ಲ. ಆದಾಗ್ಯೂ, ತ್ವರಿತ ಚಿಕಿತ್ಸೆಗಾಗಿ ರೋಗಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನವೇ ಹತ್ತಿರದ ಚಿಕಿತ್ಸಾಲಯಕ್ಕೆ ಭೇಟಿ ನೀಡುವುದು ಉತ್ತಮ ಎಂದು ಮನವಿ ಮಾಡಿದ್ದಾರೆ
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…