ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಬಸ್-ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ 24 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್ ಮೇಲೆ ಜಲ್ಲಿಕಲ್ಲಿ ತುಂಬಿದ್ದ ಟಿಪ್ಪರ್ ಮಗುಚಿಬಿದ್ದು ಅಪಘಾತ ಸಂಭವಿಸಿದೆ.
ಇದನ್ನು ಓದಿ: ತೆಲಂಗಾಣದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್ ಮೇಲೆ ಟಿಪ್ಪರ್ ಮಗುಚಿ ಬಿದ್ದು 20 ಮಂದಿ ಸಾವು
ತೆಲಂಗಾಣದ ಸರ್ಕಾರಿ ಬಸ್‌ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 24 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ನಲ್ಲಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50,000 ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.





