ದೇಶ- ವಿದೇಶ

ತೆಲಂಗಾಣದಲ್ಲಿ ರಸ್ತೆ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

ಹೈದರಾಬಾದ್:‌ ತೆಲಂಗಾಣದಲ್ಲಿ ಸಂಭವಿಸಿದ ಬಸ್‌-ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಸರ್ಕಾರಿ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದ ಪರಿಣಾಮ 24 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್‌ ಮೇಲೆ ಜಲ್ಲಿಕಲ್ಲಿ ತುಂಬಿದ್ದ ಟಿಪ್ಪರ್‌ ಮಗುಚಿಬಿದ್ದು ಅಪಘಾತ ಸಂಭವಿಸಿದೆ.

ಇದನ್ನು ಓದಿ: ತೆಲಂಗಾಣದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದು 20 ಮಂದಿ ಸಾವು

ತೆಲಂಗಾಣದ ಸರ್ಕಾರಿ ಬಸ್‌ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 24 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ನಲ್ಲಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50,000 ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

36 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

48 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago