ಇಂದೋರ್ : ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ.
ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.
ಇದನ್ನು ಓದಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ
ರಾಹುಲ್ ಗಾಂಧಿ ಜನರನ್ನು ಭೇಟಿಯಾಗಲಿದ್ದು ಯವಕರು ಅವರ ಜೊತೆ ಕೈಜೋಡಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಅವರು ಆಂದೋಲನವನ್ನು ಪ್ರಾರಂಭಿಸುತ್ತಾರೆ. ಬಿಹಾರದಲ್ಲಿ ಚುನಾವಣೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿದರು.
ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ. ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ ಎಂದರು.
ಬಿಹಾರದ 243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‍ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ. ಬಿಜೆಪಿ 89, ಜೆಡಿಯು 85 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್, ಆರ್‍ಜೆಡಿ ಮತ್ತು ಇತರ ಪಕ್ಷಗಳ ಒಕ್ಕೂಟವಾದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಗಳಿಸಿದೆ.
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…