ದೇಶ- ವಿದೇಶ

ಬಿಹಾರದಲ್ಲಿ ಮರು ಚುನಾವಣೆ ನಡೆಯಲಿ : ರಾಬರ್ಟ್‌ ವಾದ್ರಾ ಆಗ್ರಹ

ಇಂದೋರ್ : ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ.

ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.

ಇದನ್ನು ಓದಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ರಾಹುಲ್ ಗಾಂಧಿ ಜನರನ್ನು ಭೇಟಿಯಾಗಲಿದ್ದು ಯವಕರು ಅವರ ಜೊತೆ ಕೈಜೋಡಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಅವರು ಆಂದೋಲನವನ್ನು ಪ್ರಾರಂಭಿಸುತ್ತಾರೆ. ಬಿಹಾರದಲ್ಲಿ ಚುನಾವಣೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿದರು.

ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ. ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ ಎಂದರು.

ಬಿಹಾರದ 243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‍ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ. ಬಿಜೆಪಿ 89, ಜೆಡಿಯು 85 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್, ಆರ್‍ಜೆಡಿ ಮತ್ತು ಇತರ ಪಕ್ಷಗಳ ಒಕ್ಕೂಟವಾದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಗಳಿಸಿದೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

2 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

4 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

6 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

9 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

10 hours ago