ನವದೆಹಲಿ: ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಹರಿಯಾಣದ ಗುರುಗ್ರಾಮ್‌ನಲ್ಲಿ ಅತೀ ಕಡಿಮೆ ಬೆಲೆ ಭೂಮಿ ಖರೀದಿ ಮಾಡಿ, ಅತೀ ಹೆಚ್ಚಿನ ಬೆಲೆಗೆ ಜಮೀನು ಮಾರಾಟ ಮಾಡಿದ ಆರೋಪ ರಾಬರ್ಟ್ ವಾದ್ರಾ ಅವರ ಮೇಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಏಪ್ರಿಲ್.8ರಂದು ಸಮನ್ಸ್ ನೀಡಲಾಗಿತ್ತು. ಅಂದು ರಾಬರ್ಟ್ ವಾದ್ರಾ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಮತ್ತೊಂದು ಸಮನ್ಸ್ ಜಾರಿ ಮಾಡಲಾಗಿದೆ.
ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ಇಡಿ ಕಚೇರಿಗೆ ತೆರಳುವಾಗ ಬಿಜೆಪಿ ವಿರುದ್ಧ ಕಿಡಿಕಾರಿದ ರಾಬರ್ಟ್ ವಾದ್ರಾ ಅವರು, ಇದು ಬಿಜೆಪಿಯ ರಾಜಕೀಯ ದ್ವೇಷ. ನಾನು ಜನರ ಪರ ಧ್ವನಿ ಎತ್ತಿದಾಗಲೆಲ್ಲಾ ಅವರು ನನ್ನನ್ನು ನಿಗ್ರಹಿಸಲು ಪ್ರಯತ್ನಿಸುತ್ತಾರೆ. ನನ್ನ ಬಳಿ ಮುಚ್ಚಿಡಲು ಏನೂ ಇಲ್ಲ. ಏನು ಕೇಳಿದರೂ ಇಡಿ ಅಧಿಕಾರಿಗಳಿಗೆ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…