ನವದೆಹಲಿ: 2016ರಲ್ಲಿ ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಅಂತಿಮ ವರದಿ ಸಲ್ಲಿಸಿದ ಒಂದು ದಿನದ ನಂತರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ವೆಮುಲ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಎಸ್ಸಿ ಸಮುದಾಯಕ್ಕೆ ಸೇರಿದವನಲ್ಲಿ ಹಾಗಾಗಿ ತನ್ನ ನಿಜವಾದ ಜಾತಿ ತಿಳಿಯುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಪುಣೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಸ್ಸಿ ಪ್ರಮಾಣ ಪತ್ರ ಪಡೆದು ಶಿಕ್ಷಣ ಪಡೆದಿರುವ ಬಗ್ಗೆ ಸಮಾಜಕ್ಕೆ ತಿಳಿದರೆ ಶೈಕ್ಷಣಿಕ ಪ್ರಮಾಣ ಪತ್ರಗಳು ವ್ಯರ್ಥವಾಗುತ್ತದೆ ಎಂದು ಭಾವಿಸಿ ವೆಮಲಾ ಆತ್ಮಹತ್ಯೆ ಮಾಡಿಕೊಂಡಿದ್ದ ಆದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದನ್ನು ರಾಜಕೀಯಗೊಳಸಲು ಪ್ರಯತ್ನಿಸಿದ್ದರು ಎಂದು ನಿರ್ಮಲಾ ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ ಅವರು ಎಸ್ಸಿ ಸಮುದಾಯವನ್ನು ದರ್ಬಳಕೆ ಮಾಡಿಕೊಂಡಿದ್ದಾರೆ ಹಾಗಾಗಿ ರಾಗಾ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.