Mysore
27
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಗೆಲುವಿನ ಸವಿ ನೆನಪಿಗಾಗಿ ಪಿಚ್‌ ಮಣ್ಣು ತಿಂದ ರೋಹಿತ್‌ ಶರ್ಮಾ

ಬಾರ್ಬಡೋಸ್:‌ ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್‌ ಪೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿತು. ಈ ಗೆಲುವಿನ ಸವಿ ನೆನಪಿಗಾಗಿ ತಂಡದ ನಾಯಕ ರೋಹಿತ್‌ ಶರ್ಮಾ ಅವರು ಪಿಚ್‌ನ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ. ಈ ವಿಡಿಯೋವನ್ನು ಐಸಿಸಿ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಫುಟ್ಬಾಲ್‌, ಟೆನಿಸ್‌ ಸೇರಿ ಹೊರಾಂಗಣ ಕ್ರೀಡೆಯಲ್ಲಿ ಚಾಂಪಿಯನ್‌ ಆದ ತಂಡದ ಕೆಲ ಆಟಗಾರರು ಮೈದಾನದ ಒಂದೆರಡು ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಗೆಲುವಿಗೆ ನೆರವಾದ ಈ ಮೈದಾನದ ಋಣವನ್ನು ತೀರಿಸಿಕೊಳ್ಳುತ್ತಾರೆ. ಇದೇ ರೀತಿ ರೋಹಿತ್‌ ಶರ್ಮಾ ಕೂಡ ಕಪ್‌ ಗೆದ್ದ ಬಳಿಕ ಪಿಚ್‌ನಿಂದ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ.

ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್‌ ಗೆದ್ದ ರೋಹಿತ್‌ ಗೆಲುವಿನ ಬಳಿಕ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು.

 

Tags: