ಬಾರ್ಬಡೋಸ್: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಗೆಲುವಿನ ಸವಿ ನೆನಪಿಗಾಗಿ ತಂಡದ ನಾಯಕ ರೋಹಿತ್ ಶರ್ಮಾ ಅವರು ಪಿಚ್‌ನ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ. ಈ ವಿಡಿಯೋವನ್ನು ಐಸಿಸಿ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.
ಫುಟ್ಬಾಲ್, ಟೆನಿಸ್ ಸೇರಿ ಹೊರಾಂಗಣ ಕ್ರೀಡೆಯಲ್ಲಿ ಚಾಂಪಿಯನ್ ಆದ ತಂಡದ ಕೆಲ ಆಟಗಾರರು ಮೈದಾನದ ಒಂದೆರಡು ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಗೆಲುವಿಗೆ ನೆರವಾದ ಈ ಮೈದಾನದ ಋಣವನ್ನು ತೀರಿಸಿಕೊಳ್ಳುತ್ತಾರೆ. ಇದೇ ರೀತಿ ರೋಹಿತ್ ಶರ್ಮಾ ಕೂಡ ಕಪ್ ಗೆದ್ದ ಬಳಿಕ ಪಿಚ್‌ನಿಂದ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ.
ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್ ಗೆದ್ದ ರೋಹಿತ್ ಗೆಲುವಿನ ಬಳಿಕ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…