ದೇಶ- ವಿದೇಶ

ಆರ್‌.ಎಸ್‌.ಎಸ್‌ ಬ್ರಿಟಿಷರ ಜೊತೆ ಶಾಮೀಲಾಗಿತ್ತು: ಭಾಗವತ್‌ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಹೊಸದಿಲ್ಲಿ: ಭಾರತದ ವೀರರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುವಾಗ ಆರ್.‌ಎಸ್.ಎಸ್‌ ಬ್ರಿಟಿಷರ ಜೊತೆ ಶಾಮೀಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ ನವದೆಹಲಿಯಲ್ಲಿ,  ಆರ್ ಎಸ್ ಎಸ್  ಮೋಹನ್ ಭಾಗವತ್  ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಆರ್‌ಎಸ್‌ಎಸ್ ಭಾಗವಹಿಸಲಿಲ್ಲ.‌ ಶಾಮೀಲಾಗಿತ್ತು ಎಂದರು.

ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

4 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

6 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

7 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

7 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

7 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

8 hours ago