ಮಾಸ್ಕೋ: ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಷರತ್ತುಬದ್ಧ ಒಪ್ಪಿಗೆ ಸೂಚಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಗೆ ಜೊತೆಗೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಕದನ ವಿರಾಮವು ಶಾಶ್ವತ ಶಾಂತಿಗೆ ಕಾರಣವಾಗಬೇಕು. ಸಂಘರ್ಷದ ಮೂಲ ಕಾರಣಗಳನ್ನು ಪರಿಹರಿಸಬೇಕು. ತನ್ನ ಸೇನೆಯನ್ನು ಮತ್ತೆ ಸಜ್ಜುಗೊಳಿಸಲು ಸಹಕಾರಿಯಾಗಬಹುದು ಎಂದು ಪುಟಿನ್ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.
ಇನ್ನು ರಷ್ಯಾದ 2000 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಉಕ್ರೇನ್ ಸೇನೆ ಸಾಕಷ್ಟು ನಷ್ಟ ಮಾಡಿದೆ. ಬಂಧಿತ ಸೈನಿಕರನ್ನು ಹಾಗೇ ಹೋಗಲು ಬಿಡಬೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.
ಈ ಮೂಲಕ ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಹಲವು ಷರತ್ತುಗಳನ್ನು ಹೇಳಿಕೊಂಡೇ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ.