ದೇಶ- ವಿದೇಶ

ವೈದ್ಯಕೀಯ ವಿಜ್ಞಾನದಲ್ಲಿ ರಷ್ಯಾ ಮಹತ್ವದ ಸಾಧನೆ: ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿ

ಮಾಸ್ಕೋ: ರಷ್ಯಾ ದೇಶವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ್ದು, ಮುಂದಿನ ವರ್ಷದಿಂದಲೇ ಎಲ್ಲಾ ನಾಗರಿಕರಿಗೂ ಉಚಿತವಾಗಿ ನೀಡುವ ಗುರಿ ಹೊಂದಿದೆ.

ಈ ಮೂಲಕ ರಷ್ಯಾ ದೇಶವು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದೆ. ಈ ಬಗ್ಗೆ ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಣೆ ಮಾಡಿದ್ದು, ತನ್ನ ದೇಶದ ಎಲ್ಲಾ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂದು ಹೇಳಿಕೊಂಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ, ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್‌ ಅವರು, ಕ್ಯಾನ್ಸರ್‌ ಲಸಿಕೆ ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷದಿಂದಲೇ ರಷ್ಯಾದ ನಾಗರಿಕರಿಗೆ ಕ್ಯಾನ್ಸರ್‌ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದು, ರಷ್ಯಾದ ಆವಿಷ್ಕಾರ ಶತಮಾನದ ಅತಿದೊಡ್ಡ ಆವಿಷ್ಕಾರವೆಂದು ಬಣ್ಣಿಸಿದ್ದಾರೆ.

ಈ ಲಸಿಕೆಯ ಕ್ಲಿನಿಕಲ್‌ ಪ್ರಯೋಗಗಳು ಗೆಡ್ಡೆಯ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ತೋರಿಸಿದೆ ಎಂದು ವಿವರಣೆ ನೀಡಿದ್ದಾರೆ.

ಇನ್ನು ಈ ವರ್ಷಾರಂಭದಲ್ಲೇ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಕ್ಯಾನ್ಸರ್‌ ಲಸಿಕೆ ತಯಾರಿಸಲು ರಷ್ಯಾ ಬಹಳ ಸಮೀಪದಲ್ಲಿದೆ ಎಂದು ಮಾಹಿತಿ ನೀಡಿದ್ದರು. ಈಗ ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ್ದು, ರಷ್ಯಾ ದೇಶದ ಜನತೆಯ ಮೊಗದಲ್ಲಿ ಭಾರೀ ಮಂದಹಾಸ ಮನೆಮಾಡಿದೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

5 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

5 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

6 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

6 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

6 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

8 hours ago