ಕೀವ್ : ‘ನಮ್ಮ ಹಿಡಿತದಲ್ಲಿರುವ ಪೂರ್ವ ಉಕ್ರೇನ್ ಪ್ರದೇಶದಲ್ಲಿನ ಆಸ್ಪತ್ರೆಯೊಂದರ ಮೇಲೆ ಉಕ್ರೇನ್‌ನ ಸೈನಿಕರು ಉದ್ದೇಶಪೂರ್ವಕವಾಗಿ ದಾಳಿ ನಡೆಸಿ 14 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 24 ಮಂದಿ ಗಾಯಗೊಂಡಿದ್ದಾರೆ’ ಎಂದು ರಷ್ಯಾ ಶನಿವಾರ ಆರೋಪಿಸಿದೆ.
‘ನೊವಾಯ್ಡರ್‌ನಲ್ಲಿರುವ ಆಸ್ಪತ್ರೆ ಮೇಲೆ ಉಕ್ರೇನ್ ಯೋಧರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಇದು ಅತ್ಯಂತ ಗಂಭೀರವಾದ ಯುದ್ಧ ಅಪರಾಧ ಎಂಬುದರಲ್ಲಿ ಅನುಮಾನವೇ ಇಲ್ಲ’ ಎಂದು ರಷ್ಯಾದ ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.
‘ಈ ಕೃತ್ಯಕ್ಕಾಗಿ ಯೋಜನೆ ರೂಪಿಸಿರುವವರು ಹಾಗೂ ಇದನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದವರನ್ನು ಪತ್ತೆಹಚ್ಚಲಾಗುತ್ತದೆ. ಅವರಿಗೆ ತಕ್ಕ ಶಿಕ್ಷೆ ಆಗಲಿದೆ’ ಎಂದು ಹೇಳಿದೆ.ರ ರಷ್ಯಾ ದ ಆರೋಪದ ಕುರಿತು ಉಕ್ರೇನ್ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…