ನವದೆಹಲಿ: ಭಾರತ ದೇಶದ ಇತಿಹಾಸದಲ್ಲಿ ಬ್ರಿಟಿಷರ ಆಳ್ವಿಕೆ ವಿರೋಧಿಸಿ ಅವರ ವಿರುದ್ಧ ಹೋರಾಟ ನಡೆಸಿದ ಕೀರ್ತಿ ಟಿಪ್ಪು ಸುಲ್ತಾನನಿಗೆ ಸಲ್ಲುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ಇತಿಹಾಸಕಾರ ವಿಕ್ರಂ ಸಂಪತ್ ರಚಿಸಿರುವ ಟಿಪ್ಪು ಸುಲ್ತಾನ್: ದಿ ಸಗಾ ಆಫ್ ದಿ ಮೈಸೂರು ಇಂಟರ್‌ಗ್ನಮ್ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದಕ್ಷಿಣ ಭಾರತದ ಇತಿಹಾಸದಲ್ಲಿ ಟಿಪ್ಪು ಸುಲ್ತಾನ್ ಅತ್ಯಂತ ಸಂಕೀರ್ಣ ವ್ಯಕ್ತಿಯಾಗಿದ್ದರು. ಅವರು ತಮ್ಮ ಸಾವನ್ನು ಲೆಕ್ಕಿಸದೆ ಹೋರಾಟ ನಡೆಸಿದ ಕೀರ್ತಿ ಸಲ್ಲುತ್ತದೆ. ಆದರೆ ಆತನ ಸೋಲು ಹಾಗೂ ಸಾವು ಒಂದು ಮಹತ್ವದ ತಿರುವು ಪಡೆದಿದ್ದನ್ನು ಭಾರತೀಯ ಇತಿಹಾಸ ಪುಟಗಳಲ್ಲಿ ಕಾಣಬಹುದಾಗಿದೆ ಎಂದಿದ್ದಾರೆ.
ಟಿಪ್ಪು ಸುಲ್ತಾನ್ ತನ್ನ ಆಡಳಿತ ಕಾಲದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡುವುದರಲ್ಲಿ ಹೆಚ್ಚು ಗಮನಹರಿಸಿದ್ದರಿಂದ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಟಿಪ್ಪು ಹೇಗೆ ತನ್ನ ಸಾಧನೆಗೆ ಪ್ರಮುಖ ಕಾರಣರಾಗಿದ್ದರೋ ಅದೇ ರೀತಿಯಲ್ಲಿ ವಿವಾದಾತ್ಮಕ ಅಂಶಗಳಿಗೂ ಕೆಲಸ ಮಾಡಿದ್ದಾರೆ. ಟಿಪ್ಪು ದೇಶಕ್ಕಾಗಿ ತಮ್ಮ ಮಕ್ಕಳನ್ನೇ ಅಡವಿಟ್ಟಿದ್ದರು ಎಂದು ಹೇಳಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…