ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್ ಮಾಡಿದ್ದು, ಎಸ್.ಎಂ.ಕೃಷ್ಣ ಅವರು ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ, ಸಂಸತ್ತಿನ ಸದಸ್ಯ, ಕೇಂದ್ರ ಸಚಿವ ಹಾಗೂ ರಾಜ್ಯಪಾಲರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದವರು. ಆದರೆ ಇಂದು ಅವರ ನಿಧನದ ಸುದ್ದಿಯನ್ನು ಕೇಳಿ ತೀವ್ರ ದುಃಖವಾಗಿದೆ. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿ ಅಪಾರ ಜನ ಮನ್ನಣೆಯನ್ನುಗಳಿಸಿದ್ದರು. ಅವರ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು, ಎಸ್.ಎಂ.ಕೃಷ್ಣ ಅವರೊದೊಗೆ ಕಳೆದಂತಹ ಭಾವನಾತ್ಮ ಕ್ಷಣಗಳ ಭಾವಚಿತ್ರವನ್ನು ಹಂಚಿಕೊಂಡು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಎಸ್.ಎಂ ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು. ಅಲ್ಲದೇ ಅವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದನ್ನು ಸ್ಮರಿಸಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ತಮ್ಮ ಎಕ್ಸ್ ಖಾತೆಯ ಮೂಲಕ ಸಂತಾಪ ಸೂಚಿಸಿದ್ದು, ಎಸ್.ಎಂ. ಕೃಷ್ಣ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರು ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಹಾಗೂ ಬೆಂಗಳೂರು ತಾಂತ್ರಿಕ ಕೇಂದ್ರವಾಗಿ ರೂಪಾಂತರಗೊಳ್ಳಲು ಗಣನೀಯವಾದ ಕೊಡುಗೆಯನ್ನು ನೀಡಿದ್ದಾರೆ. ಅವರು ನಿಧನರಾದ ಹಿನ್ನೆಲೆಯ ಕಷ್ಟದ ಸಮಯದಲ್ಲಿ ಅವರ ಕುಟುಂಬಸ್ಥರು ಹಾಗೂ ಪ್ರೀತಿ ಪಾತ್ರರ ಜೊತೆಗೆ ನಾವಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಎಸ್. ಎಂ. ಕೃಷ್ಣರ ನಿಧನ ತೀವ್ರ ನೋವುಂಟುಮಾಡಿದೆ. ಅಭಿವೃದ್ಧಿಯ ಕನಸುಗಾರರಾಗಿದ್ದ ಅವರು ರಾಜ್ಯ ಹಾಗು ರಾಷ್ಟ್ರದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನನ್ನ ಆತ್ಮೀಯರಾಗಿ, ಸಹೋದ್ಯೋಗಿಯಾಗಿ ಜೊತೆಯಾಗಿದ್ದ ಅವರ ನಿಧನ ನನಗೆ ವೈಯಕ್ತಿಕವಾಗಿ ನಷ್ಟ ಉಂಟುಮಾಡಿದೆ ಎಂದಿದ್ದಾರೆ.
ಎಸ್. ಎಂ. ಕೃಷ್ಣರ ದೂರದೃಷ್ಟಿ, ಬದ್ಧತೆ ಮತ್ತು ಅಪ್ರತಿಮ ಸಾರ್ವಜನಿಕ ಸೇವೆಯು ಕರ್ನಾಟಕದ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಸಾಮಾಜಿಕ ಕಲ್ಯಾಣ ಮತ್ತು ಅಭಿವೃದ್ಧಿಯ ನಡುವೆ ಅವರು ಸಾಧಿಸಿದ ಸಮನ್ವಯತೆ ಬೆಂಗಳೂರನ್ನು ಜಾಗತಿಕವಾಗಿ ಗುರುತಿಸುವಂತೆ ಮಾಡಿದೆ. ಅವರ ಕುಟುಂಬಕ್ಕೆ, ಸ್ನೇಹಿತರಿಗೆ, ಅಪಾರ ಅಭಿಮಾನಿ ಬಳಗಕ್ಕೆ ನನ್ನ ಅತೀವ ಸಂತಾಪಗಳು ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಸ್‌ಎಂಕೆ ನಿಧನಕ್ಕೆ ಸಂತಾಪ ಸೂಚಿಸಿದ್ದು, ನನ್ನ ಬಹುಕಾಲದ ಸ್ನೇಹಿತ ಮತ್ತು ಸಹೋದ್ಯೋಗಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ತೀವ್ರ ದುಃಖವನ್ನುಂಟು ಮಾಡಿದೆ. ನಾವಿಬ್ಬರು ಒಟ್ಟಿಗೆ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದೇವು. ಆದರೆ ನಾವಿಬ್ಬರೂ ಅಭಿವೃದ್ಧಿ ಹಾಗೂ ಆಡಳಿತಕ್ಕೆ ವಿಭಿನ್ನ ದಾರಿಗಳನ್ನು ಕಂಡುಕೊಂಡಿದ್ದೇವು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುದ ಅವರು ರಾಜ್ಯವನ್ನು ಗಮನಾರ್ಹ ಪ್ರಗತಿಯತ್ತ ಮುನ್ನಡೆಸಿದರು. ಅಲ್ಲದೇ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ದೇಶದ ರಾಜನೀತಿಯನ್ನು ಬಲಪಡಿಸಿದ್ದರು ಎಂದು ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…