ಶಬರಿಮಲೆ: ಕೇರಳದ ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಅವರನ್ನು ಬಂಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಬಂಧಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ಇದನ್ನು ಓದಿ:ಶಬರಿಮಲೆ ದೇವಸ್ಥಾನದ ಚಿನ್ನ ಕಳುವು ಪ್ರಕರಣ: ಪೊಟ್ಟಿ ಉನ್ನಿಕೃಷ್ಣನ್ ನಿವಾಸದ ಮೇಲೆ ಎಸ್‌ಐಟಿ ದಾಳಿ
ತಿರುವನಂತಪುರಂ ಅಪರಾಧ ಶಾಖೆಯ ಕಚೇರಿಯಲ್ಲಿ ಎಸ್‌ಐಟಿ ವಿಚಾರಣೆ ನಡೆಸಿದ ನಂತರ ಸುಧೀಶ್ ಕುಮಾರ್ ಅವರನ್ನು ಬಂಧಿಸಲಾಯಿತು. ಕುಮಾರ್ ಕಳೆದ 2019ರಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ದ್ವಾರಪಾಲಕ ವಿಗ್ರಹಗಳನ್ನು ಚಿನ್ನದಿಂದ ಲೇಪಿಸಲಾಗಿದ್ದು, ದೇವಾಲಯದ ಅಧಿಕೃತ ದಾಖಲೆಗಳಲ್ಲಿ ತಾಮ್ರದ ಹಾಳೆಗಳಾಗಿ ದಾಖಲಿಸಲಾಗಿದೆ ಎಂದು ಅವರ ಮೇಲೆ ಗಂಭೀರ ಆರೋಪ ಮಾಡಲಾಗಿದೆ.





