ದೇಶ- ವಿದೇಶ

ಶಬರಿಮಲೆಯಲ್ಲಿ ಚಿನ್ನ ಕಳ್ಳತನ ಪ್ರಕರಣ: ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್‌ ಕುಮಾರ್‌ ಬಂಧನ

ಶಬರಿಮಲೆ: ಕೇರಳದ ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್‌ ಕುಮಾರ್‌ ಅವರನ್ನು ಬಂಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್‌ ಪೊಟ್ಟಿ ಅವರನ್ನು ಬಂಧಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಇದನ್ನು ಓದಿ:ಶಬರಿಮಲೆ ದೇವಸ್ಥಾನದ ಚಿನ್ನ ಕಳುವು ಪ್ರಕರಣ: ಪೊಟ್ಟಿ ಉನ್ನಿಕೃಷ್ಣನ್‌ ನಿವಾಸದ ಮೇಲೆ ಎಸ್‌ಐಟಿ ದಾಳಿ 

ತಿರುವನಂತಪುರಂ ಅಪರಾಧ ಶಾಖೆಯ ಕಚೇರಿಯಲ್ಲಿ ಎಸ್‌ಐಟಿ ವಿಚಾರಣೆ ನಡೆಸಿದ ನಂತರ ಸುಧೀಶ್‌ ಕುಮಾರ್‌ ಅವರನ್ನು ಬಂಧಿಸಲಾಯಿತು. ಕುಮಾರ್‌ ಕಳೆದ 2019ರಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ದ್ವಾರಪಾಲಕ ವಿಗ್ರಹಗಳನ್ನು ಚಿನ್ನದಿಂದ ಲೇಪಿಸಲಾಗಿದ್ದು, ದೇವಾಲಯದ ಅಧಿಕೃತ ದಾಖಲೆಗಳಲ್ಲಿ ತಾಮ್ರದ ಹಾಳೆಗಳಾಗಿ ದಾಖಲಿಸಲಾಗಿದೆ ಎಂದು ಅವರ ಮೇಲೆ ಗಂಭೀರ ಆರೋಪ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

3 mins ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

10 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

6 hours ago