ಮುಂಬೈ: ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗಷ್ಟೆ ಸಲ್ಮಾನ್ ಖಾನ್ ಅಪಾರ್ಟ್‌ಮೆಂಟ್ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದರು. ಕುಖ್ಯಾತ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಮೇರೆಗೆ ನಡೆದಿತ್ತು.
ಇದೀಗ ಸಲ್ನಾನ್ ಖಾನ್ ತಂದೆ, ಹೆಸರಾಂತ ಚಿತ್ರಕಥೆಗಾರ ಸಲೀಮ್ ಖಾನ್ ಅವರಿಗೂ ಬೆದರಿಕೆ ಬಂದಿದೆ. ಎಂದಿನಂತೆ ಸಲೀಮ್ ಖಾನ್ ಬೆಳಗಿನ ವಾಕ್ ಮುಗಿಸಿ, ಮುಂಬೈನ ಬಾಂದ್ರಾದ ಬ್ಯಾಂಡ್‌ಸ್ಟ್ಯಾಂಡ್ ವಾಯುವಿಹಾರ ಪ್ರದೇಶದಲ್ಲಿ ಕುಳಿತಿದ್ದಾಗ ಬೆದರಿಕೆ ಹಾಕಿದ್ದಾರೆ. ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಹೆಸರು ಉಲ್ಲೇಖಿಸಿ ಬೆದರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ವ್ಯಕ್ತಿಯು ಸಲೀಮ್ ಖಾನ್ ಅವರನ್ನು ನೋಡಿ, ವಾಹನ ನಿಲ್ಲಿಸಿ, ನಿನ್ನ ಬಳಿಗೆ ಲಾರೆನ್ಸ್ ಬಿಷ್ಣೋಯಿಯನ್ನ ಕಳುಹಿಸಬೇಕಾ? ಎಂದು ಪ್ರಶ್ನಿಸಿದ್ದಾರೆ. ಬಳಿಕ ಅವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ವಾಹನದ ನಂಬರ್ ಗಮನಿಸಿದ ಬಾಡಿಗಾರ್ಡ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿದ್ದಾರೆ.