ದೇಶ- ವಿದೇಶ

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗಷ್ಟೆ ಸಲ್ಮಾನ್‌ ಖಾನ್‌ ಅಪಾರ್ಟ್‌ಮೆಂಟ್‌ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದರು. ಕುಖ್ಯಾತ ಗ್ಯಾಂಗ್‌ ಸ್ಟಾರ್‌ ಲಾರೆನ್ಸ್‌ ಬಿಷ್ಣೋಯ್‌ ಮೇರೆಗೆ ನಡೆದಿತ್ತು.

ಇದೀಗ ಸಲ್ನಾನ್‌ ಖಾನ್‌ ತಂದೆ, ಹೆಸರಾಂತ ಚಿತ್ರಕಥೆಗಾರ ಸಲೀಮ್‌ ಖಾನ್‌ ಅವರಿಗೂ ಬೆದರಿಕೆ ಬಂದಿದೆ. ಎಂದಿನಂತೆ ಸಲೀಮ್‌ ಖಾನ್‌ ಬೆಳಗಿನ ವಾಕ್‌ ಮುಗಿಸಿ, ಮುಂಬೈನ ಬಾಂದ್ರಾದ ಬ್ಯಾಂಡ್‌ಸ್ಟ್ಯಾಂಡ್‌ ವಾಯುವಿಹಾರ ಪ್ರದೇಶದಲ್ಲಿ ಕುಳಿತಿದ್ದಾಗ ಬೆದರಿಕೆ ಹಾಕಿದ್ದಾರೆ. ಜೈಲಿನಲ್ಲಿರುವ ಲಾರೆನ್ಸ್‌ ಬಿಷ್ಣೋಯ್‌ ಹೆಸರು ಉಲ್ಲೇಖಿಸಿ ಬೆದರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ವ್ಯಕ್ತಿಯು ಸಲೀಮ್‌ ಖಾನ್‌ ಅವರನ್ನು ನೋಡಿ, ವಾಹನ ನಿಲ್ಲಿಸಿ, ನಿನ್ನ ಬಳಿಗೆ ಲಾರೆನ್ಸ್‌ ಬಿಷ್ಣೋಯಿಯನ್ನ ಕಳುಹಿಸಬೇಕಾ? ಎಂದು ಪ್ರಶ್ನಿಸಿದ್ದಾರೆ. ಬಳಿಕ ಅವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ವಾಹನದ ನಂಬರ್‌ ಗಮನಿಸಿದ ಬಾಡಿಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಫುಟ್‌ಪಾತ್ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಿ

ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ…

1 hour ago

ಓದುಗರ ಪತ್ರ: ಗೋಲ್ಡನ್ ಪಾಸ್‌ನ ‘ಗೌರವ’ ಕಾಪಾಡಿ

ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್‌ಗಳನ್ನು ವಿತರಣೆ…

1 hour ago

ಓದುಗರ ಪತ್ರ: ರೈತರ ವಿರೋಧ ಕಟ್ಟಿಕೊಳ್ಳುವುದೇಕೆ?

ಬಿಡದಿ ಟೌನ್‌ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿದ್ಯಾರ್ಥಿಗಳ ಹೋರಾಟಕ್ಕೆ ಕಿವುಡಾದ ಬಿಜೆಪಿ ಆಡಳಿತ

ವೈದ್ಯಕೀಯ ಶಿಕ್ಷಣ ಎಂಬಿಬಿಎಸ್ ಮತ್ತು ಅದರ ಸಂಬಂಧಿತ ಬಿಡಿಎಸ್, ಬಿಎಎಂಎಸ್ ಹಾಗೂ ಬಿಎಚ್‌ಎಂಎಸ್ ಪದವಿ ಶಿಕ್ಷಣದ ಪ್ರವೇಶಕ್ಕೆ ಅರ್ಹತೆಯನ್ನು ಪರೀಕ್ಷಿಸುವ…

2 hours ago

ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಕಲೇಶಪುರ ರೈಲು ಮಾರ್ಗದಲ್ಲಿ ಶೀಘ್ರವೇ ವಂದೇ ಭಾರತ್ ಪ್ರಯಾಣಿಕರ ರೈಲು ಸಂಚಾರ ಆರಂಭಿಸಲು…

2 hours ago

ಈ ಕಂಬಳ ಯಾಕ್ ಬೇಕೂಂತ?

ಕುಸುಮ ಆಯರಹಳ್ಳಿ ಈ ಊರ ಹಳೇ ಹೆಸರೇನೇಳಿ? ಮಹಿಷ ಮಂಡಲ, ಮಯಿಸನಾಡು, ಮೈಸಾಪುರ... ಆ ಮೈಸಾಪುರವೇ ನಂತರ ಮೈಸೂರು ಆಯ್ತು…

2 hours ago