ಸಂಭಲ್: ಇಲ್ಲಿನ ಶಾಹಿ ಜುಮಾ ಮಸೀದಿ ಸಮೀಕ್ಷೆ ವೇಳೆ 2024ರಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಇಂದು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಭಾಲ್ ಹಿಂಸಾಚಾರ ಪ್ರಕರಣದಲ್ಲಿ ಖಗ್ಗು ಸರಾಯ್ ಪ್ರದೇಶದ ನಿವಾಸಿಯಾಗಿರುವ ಆರೋಪಿ ಅರ್ಷದ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಅವರು ಮಾಹಿತಿ ನೀಡಿದ್ದಾರೆ.
ಈ ಆರೋಪಿಯನ್ನು ಸಂಭಾಲ್ ಹಿಂಸಾಚಾರದ ಘಟನೆಯ ವಿಡಿಯೋದ ಸಾಕ್ಷ್ಯ ಚಿತ್ರ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಲಾಗಿದ್ದು, ನಿನ್ನೆ(ಫೆಬ್ರವರಿ.1) ಅಷ್ಟೇ ಬಂಧಿಸಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಇದುವರೆಗೂ ಒಟ್ಟು 74 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನು ಶೀಘ್ರದಲ್ಲದೇ ಬಂಧಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
2024ರ ನವೆಂಬರ್ 24 ರಂದು ಎರಡನೇ ಸುತ್ತಿನ ಸಮೀಕ್ಷೆಯ ವೇಳೆ ಪ್ರತಿಭಟನಾನಿರತ ಸ್ಥಳೀಯರು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಘರ್ಷಣೆಯೂ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ನಾಲ್ವರು ಮಂದಿ ಸಾವನ್ನಪ್ಪಿದ್ದು, ಹಲವರು ಮಂದಿ ಗಾಯಗೊಂಡಿದ್ದರು.