ದೇಶ- ವಿದೇಶ

ಲೋಕಸಭೆಯಲ್ಲಿ ಗದ್ದಲ, ಕೋಲಾಹಲ: ವಿಪಕ್ಷಗಳಿಂದ ಕೆಲಕಾಲ ಸಭಾತ್ಯಾಗ

ನವದೆಹಲಿ: ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳ ಸದಸ್ಯರು ಲೋಕಸಭೆಯಿಂದ ಕೆಲ ಕಾಲ ಸಭಾತ್ಯಾಗ ಮಾಡಿದರು.

ಲೋಕಸಭಾ ಸದನ ಪ್ರಾರಂಭಗೊಂಡು, ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳಲು ಮುಂದಾಗುತ್ತಿದ್ದಂತೆಯೇ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ತಮ್ಮ ಆಸನದಿಂದ ಮೇಲೆದ್ದು ಹಿಂಸಾಚಾರದ ಕುರಿತು ಮಾತನಾಡುವಂತೆ ಆಗ್ರಹಿಸಿದರು.

ಹಿಂಸಾಚಾರ ಕುರಿತು ಸುದೀರ್ಘ ಚರ್ಚೆ ನಡೆಸುವಂತೆ ಸ್ಪೀಕರ್‌ ಓಂಬಿರ್ಲಾಗೆ ಮನವಿ ಮಾಡಿದರು.

ಇದು ತುಂಬಾ ಗಂಭೀರ ವಿಷಯ, ಈ ಹಿಂಸಾಚಾರದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಖಿಲೇಶ್‌ ಯಾದವ್‌ ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್‌ ಓಂಬಿರ್ಲಾ ಅವರು, ಈ ವಿಷಯವನ್ನು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಬಹುದು ಎಂದರು.

ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ವಿರೋಧ ಪಕ್ಷಗಳ ನಾಯಕರು ಸದನದ ಬಾವಿಗೆ ನುಗ್ಗಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಲೋಕಸಭೆಯಿಂದ ಸಭಾತ್ಯಾಗ ಮಾಡಿದರು.

ಕಾಂಗ್ರೆಸ್‌ ಸದಸ್ಯರು ತಮ್ಮ ಆಸನದಿಂದ ಮೇಲೆದ್ದು ನಿಂತರೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಪ್ರತಿಭಟನೆ ನಡೆಯುತ್ತಿದ್ದಂತೆ ಅಖಿಲೇಶ್‌ ಯಾದವ್‌ ಅವರು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಬಳಿಗೆ ತೆರಳಿ ಚರ್ಚೆ ನಡೆಸುವಂತೆ ಕೋರಿದರು.

ಕೆಲ ಸಮಯದ ನಂತರ, ಲೋಕಸಭೆಯಿಂದ ಹೊರ ನಡೆಯುವಂತೆ ತಮ್ಮ ಪಕ್ಷದ ಸದಸ್ಯರು ಹಾಗೂ ರಾಹುಲ್‌ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ಸದಸ್ಯರಿಗೆ ಅಖಿಲೇಶ್‌ ಯಾದವ್‌ ಸೂಚನೆ ನೀಡಿದರು. ಈ ವೇಳೆ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ನಡೆಸಿದವು.

ನಂತರ, ಪ್ರಶ್ನೋತ್ತರ ಕಲಾಪದಲ್ಲಿ ಭಾಗವಹಿಸಲು ಲೋಕಸಭೆಗೆ ಮರಳಿದವು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

6 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

8 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

8 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

8 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

8 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

8 hours ago