ದೇಶ- ವಿದೇಶ

ಶಾರುಖ್‌ ಖಾನ್‌ ಮೇಲೂ ದಾಳಿಗೆ ಸಂಚು..!

ಮುಂಬೈ: ಬಾಲಿವುಡ್ ನಟ ಸೈಫ್ ಆಲಿಖಾನ್ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್ ಖಾನ್ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಶಾರುಖ್ ಖಾನ್ ಅವರ ನಿವಾಸದ ಬಳಿ ಅನುಮಾನಾಸ್ಪದ ಓಡಾಟ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸೈಫ್ ಮೇಲಿನ ದಾಳಿಯ ನಂತರ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ತಂಡ ಶಾರುಖ್ ಖಾನ್ ಅವರ ನಿವಾಸ ಮನ್ನತ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಜನವರಿ 14 ರಂದು ಶಾರುಖ್ ಖಾನ್ ಅವರ ನಿವಾಸದ ಬಳಿ ಅನುಮಾನಾಸ್ಪದ ಚಲನವಲನ ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮನ್ನತ್ ಪಕ್ಕದಲ್ಲಿರುವ ರಿಟ್ರೀಟ್ ಹೌಸ್‍ನ ಹಿಂಭಾಗದಲ್ಲಿ 6-8 ಅಡಿ ಉದ್ದದ ಕಬ್ಬಿಣದ ಏಣಿಯನ್ನು ಇರಿಸುವ ಮೂಲಕ ವ್ಯಕ್ತಿಯೊಬ್ಬರು ಆವರಣವನ್ನು ವೀಕ್ಷಿಸಲು ಪ್ರಯತ್ನಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಸಿಎಂ ಡಿ.ಕೆ.ಶಿವಕುಮಾರ್‌ ಡಿನ್ನರ್‌ ಪಾರ್ಟಿ: ಸಿಎಂ ಬಣದ ಇಬ್ಬರು ಸಚಿವರು ಗೈರು, ಬಿಜೆಪಿಯ ಇಬ್ಬರು ಶಾಸಕರು ಭಾಗಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್‌ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ…

36 mins ago

ಎಂಪಿ ಟಿಕೆಟ್‌ ಕಳೆದುಕೊಂಡು ಒಂದು ವರ್ಷವಾಯಿತು: ಮಾಜಿ ಸಂಸದ ಪ್ರತಾಪ್‌ ಸಿಂಹ ಟ್ವೀಟ್‌

ಮೈಸೂರು: ಎಂಪಿ ಟಿಕೆಟ್ ಕಳೆದುಕೊಂಡು ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ ಹಾಗೂ ಜನರ ಆಶೀರ್ವಾದ ಇವತ್ತಿಗೂ ಹಾಗೆಯೇ ಇದೆ…

39 mins ago

ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ ರಷ್ಯಾ: ಹಲವು ಬೇಡಿಕೆಯಿಟ್ಟ ವ್ಲಾಡಿಮಿರ್‌ ಪುಟಿನ್‌

ಮಾಸ್ಕೋ: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕಾದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.…

59 mins ago

ಮದುವೆಗೆ ನಿರಾಕರಿಸಿದ ಪ್ರಿಯಕರ: ಯುವತಿ ಸೂಸೈಡ್: ಪುತ್ರಿ ಸಾವಿನ ಬಳಿಕ ತಾಯಿ ಆತ್ಮಹತ್ಯೆ

ಮಂಡ್ಯ: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಮಗಳು ಸಾವನ್ನಪ್ಪಿದ್ದ 20 ದಿನಗಳ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ…

2 hours ago

ಮತ್ತೆ ಬರಲಿರುವ ರಾಮಾಚಾರಿ ಇದು ‘ನಾಗರಹಾವು’ ಚಿತ್ರದ ಮುಂದಿನ ಭಾಗ

‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ,…

5 hours ago

ಕಿಡಿ ಹೊತ್ತಿಸಲು ಬಂದ ನಿರಂಜನ್ ಹೊಸ ಚಿತ್ರ ‘ಸ್ಪಾರ್ಕ್’ ಪ್ರಾರಂಭ

ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ…

5 hours ago