Mysore
33
scattered clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಭೇಟಿಯಾದ ಸತೀಶ್‌ ಜಾರಕಿಹೊಳಿ

ನವದೆಹಲಿ: ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ ಬಗ್ಗೆ ಮಾತನಾಡಬಾರದು ಎಂದು ತಾಕೀತು ಮಾಡಿದ ಬೆನ್ನಲ್ಲೇ ಸಚಿವ ಸತೀಶ್‌ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.

ದೆಹಲಿಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಕಾಂಗ್ರೆಸ್‌ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಹೈಕಮಾಂಡ್‌ ಜೊತೆ ಚರ್ಚೆ ನಡೆಸಿದ್ದು, ಒಂದು ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ಸಿಎಂ ಸ್ಥಾನ ಬದಲಾವಣೆ ಮಾಡುವುದಾದರೆ ಆ ಸ್ಥಾನಗಳಿಗೆ ದಲಿತ ನಾಯಕರನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಹಾಗೆಯೇ, ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶ ನಡೆಸಲು ಅನುಮತಿ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

Tags: