Mysore
20
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಎಸ್‌ಸಿ ಒಳಮೀಸಲಾತಿ: ತೀರ್ಪು ಮರುಪರಿಶೀಲನೆ ಕೋರಿದ್ದ ಅರ್ಜಿ ವಜಾ

ನವದೆಹಲಿ: ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯದಲ್ಲಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಸಲು ಸುಪ್ರೀಂ ಕೋರ್ಟ್‌ ಶುಕ್ರವಾರ(ಆ.4) ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಬಿಆರ್‌ ಗವಾಯಿ, ಬೇಲಾ ತ್ರಿವೇದಿ, ಮನೋಜ್‌ ಮೀಶ್ರಾ, ವಿಕ್ರಮ್‌ ನಾಥ್‌, ಪಂಕಜ್‌ ಮಿಥಾಲ್‌ ಮತ್ತು ಸತೀಶ್‌ ಚಂದ್ರ ಶರ್ಮಾ ಅವರಿದ್ದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು, ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಎಸ್‌ಸಿ ಒಳಮೀಸಲಾತಿ ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಸುಪ್ರೀಂ ಕೋರ್ಟ್‌ ಕಳೆದ ಆಗಸ್ಟ್‌ 1 ರಂದು ಒಳಮೀಸಲಾತಿ ಸಂಬಂಧ ಮಹತ್ವ ತೀರ್ಪು ನೀಡಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಿ, ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿಯಲ್ಲಿ ಪ್ರತ್ಯೇಕ ಕೋಟಾಗಳೊಂದಿಗೆ ಒಳ ಮೀಸಲಾತಿ ನೀಡಬಹುದು ಎಂದು ಹೇಳಿತ್ತು.

Tags:
error: Content is protected !!