ನವದೆಹಲಿ: ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯದಲ್ಲಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಸಲು ಸುಪ್ರೀಂ ಕೋರ್ಟ್ ಶುಕ್ರವಾರ(ಆ.4) ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಬೇಲಾ ತ್ರಿವೇದಿ, ಮನೋಜ್ ಮೀಶ್ರಾ, ವಿಕ್ರಮ್ ನಾಥ್, ಪಂಕಜ್ ಮಿಥಾಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು, ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಎಸ್‌ಸಿ ಒಳಮೀಸಲಾತಿ ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್ ಕಳೆದ ಆಗಸ್ಟ್ 1 ರಂದು ಒಳಮೀಸಲಾತಿ ಸಂಬಂಧ ಮಹತ್ವ ತೀರ್ಪು ನೀಡಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಿ, ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿಯಲ್ಲಿ ಪ್ರತ್ಯೇಕ ಕೋಟಾಗಳೊಂದಿಗೆ ಒಳ ಮೀಸಲಾತಿ ನೀಡಬಹುದು ಎಂದು ಹೇಳಿತ್ತು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…