ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಇಂದು ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿದೆ.
ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಮಾರ್ಚ್.22ರಂದು ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿದ್ಯಾರ್ಥಿಗಳಿಗೆ ಯಾಕೆ ಕಿರುಕುಳ ನೀಡುತ್ತಿದ್ದೀರಿ? ನೀವು ಈ ರೀತಿ ವರ್ತಿಸಬಾರದು. ನಿಮಗೆ ನಿಜವಾಗಿಯೂ ವಿದ್ಯಾರ್ಥಿಗಳ ಹಿತದ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ಒಳ್ಳೆಯ ಶಾಲೆಗಳನ್ನು ತೆರೆಯಿರಿ.
ವಿದ್ಯಾರ್ಥಿಗಳ ಕತ್ತು ಹಿಸುಕುವ ಕೆಲಸ ಮಾಡಬೇಡಿ. ಪ್ರೌಢಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ನಾಟಕ ಸರ್ಕಾರ ಅನುಸರಿಸುತ್ತಿರುವ ನೀತಿಯನ್ನು ದೇಶದ ಬೇರೆ ಯಾವುದೇ ರಾಜ್ಯಗಳು ಅನುಸರಿಸುತ್ತಿಲ್ಲ ಎಂದು ಆದೇಶ ನೀಡಿದೆ.