ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡರೆ ಮತಾಂತರಗೊಂಡ ವ್ಯಕ್ತಿಯು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾನೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (ಎಸ್‍ಸಿ, ಎಸ್‍ಟಿ ಕಾಯ್ದೆ)ಯಡಿ ರಕ್ಷಣೆ ಕೇಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಪಿ.ಕೆ .ಮಿಶ್ರಾ ಮತ್ತು ಮನಮೋಹನ್ ಅವರ ಪೀಠವು ತೀರ್ಪು ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಪಿ. ಕೆ. ಮಿಶ್ರಾ ಮತ್ತು ಎನ್. ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ತೀರ್ಪನ್ನು ನೀಡಿದ್ದು ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಮತಾಂತರವಾದರೆ ಮೀಸಲಾತಿ ಇಲ್ಲ. ಎಸ್ ಸಿ ಸಮುದಾಯಕ್ಕೆ ಸಿಗುವ ಸೌಲಭ್ಯ ಮತ್ತು ಎಸ್ ಸಿ, ಎಸ್ ಟಿ ಕಾಯ್ದೆ ರಕ್ಷಣೆ ಸಿಗಲ್ಲ ಎಂದು ಸ್ಪಷ್ಟಪಡಿಸಿದೆ.
ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅರ್ಹನಲ್ಲ. ಒಬ್ಬ ವ್ಯಕ್ತಿಯು ಕ್ರೈಸ್ತ ಧರ್ಮ ಅಥವಾ ಇತರ ಧರ್ಮಗಳಿಗೆ ಮತಾಂತರಗೊಂಡು ಅದನ್ನು ಅನುಸರಿಸುತ್ತಿದ್ದರೆ, ಅವರು ತಮ್ಮ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಪೀಠ ತಿಳಿಸಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…