ಚಂಡೀಗಢ : ಶಾಲಾ ಬಸ್ ಪಲ್ಟಿಯಾಗಿ ಸುಮಾರು ೪೦ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯಗಳಾಗಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ.
ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್ ವೇಸ್ ಬಳಿ ಈ ಭೀಕರ ಅಪಘಾತ ಸಂಭವಿಸಿ ಬಸ್ ಪಲ್ಟಿಯಾಗಿದೆ. ಪರಿಣಾಮ ೪೦ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಾಳಿದ್ದು, ವಿದ್ಯಾರ್ಥಿಗಳನ್ನ ಕೂಡಲೇ ಪಿಂಜೋರ್ ಆಸ್ಪತ್ರೆ ಮತ್ತು ಪಂಚಕುಲದ ಸೆಕ್ಟರ್ ೬ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಭೀಕರ ಅಪಘಾತಕ್ಕೆ ಚಾಲಕನ ಅತೀ ವೇಗವೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಟಿದ್ದಾರೆ.





