Mysore
20
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ ಪಾಕಿಸ್ತಾನ ಪ್ರಸ್ತಾಪ ಇಟ್ಟಿದೆ.

21 ಗಂಟೆಗಳ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಭಾರೀ ಮುಖಭಂಗ ಅನುಭವಿಸಿರುವ ಪಾಕ್‌ ಮತ್ತೆ ತನ್ನ ಪ್ರತಿಷ್ಠೆ ಹೆಚ್ಚಿಸಿಕೊಳ್ಳಲು ಮಾತುಕತೆಗೆ ಆಹ್ವಾನಿಸಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಇರಾನ್‌ ನಮ್ಮ ಬೇಡಿಕೆಗಳನ್ನು ಸ್ವೀಕರಿಸಲು ಆಸಕ್ತಿ ತೋರಿಸಿದ್ರೆ ಮಾತ್ರ ಮಾತುಕತೆಗೆ ಬರುತ್ತೇವೆ ಎಂದು ಹೇಳಿದ್ದಾರೆ.

ಈಗಾಗಲೇ ಡೊನಾಲ್ಡ್‌ ಟ್ರಂಪ್‌ ಘೋಷಿಸಿರುವ ಕದನ ವಿರಾಮ ಸಮಯವು ಏಪ್ರಿಲ್.‌21ಕ್ಕೆ ಮುಕ್ತಾಯಗೊಳ್ಳಲಿದೆ. ಅಷ್ಟರಲ್ಲಿ 2ನೇ ಹಂತದ ಮತುಕತೆಗೆ ವೇದಿಕೆ ಕಲ್ಪಿಸಿ ಸಂಧಾನ ನಡೆಸಲು ಪಾಕಿಸ್ತಾನ ಹೆಣಗಾಡುತ್ತಿದೆ.

 

 

Tags:
error: Content is protected !!