ದೇಶ- ವಿದೇಶ

ಸಂಸತ್ʼನಲ್ಲಿ ಭದ್ರತಾ ವೈಫಲ್ಯ

ಹೊಸದಿಲ್ಲಿ : ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯವಾಗಿದ್ದು, ವ್ಯಕ್ತಿಯೋರ್ವ ಮರವೇರಿ ಗೋಡೆ ಹಾರಿ ಸಂಸತ್ ಭವನಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ. ಇಂದು ಬೆಳಿಗ್ಗೆ 6:30 ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಮರದ ಸಹಾಯದಿಂದ ಗೋಡೆ ಹಾರಿ ಸಂಸತ್ತಿನ ಆವರಣಕ್ಕೆ ಪ್ರವೇಶಿಸಿದ್ದಾನೆ.

ರೈಲ್ವೆ ಭವನ ಕಡೆಯಿಂದ ಗೋಡೆ ಹಾರಿ ಹೊಸದಾಗಿ ನಿರ್ಮಿಸಲಾದ ಸಂಸತ್ತು ಕಟ್ಟಡದ ಗರುಡ ದ್ವಾರ (ಗರುಡ ಗೇಟ್) ಗೆ ಪ್ರವೇಶಿಸಿದ್ದಾನೆ ಎಂದು ವರದಿಯಾಗಿದೆ. ಇದೀಗ ಶಂಕಿತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

7 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

8 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

9 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

9 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

9 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

11 hours ago