ನವದೆಹಲಿ: ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ಸಿಪಿಐ ಹಿರಿಯ ನಾಯಕ ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
72 ವರ್ಷದ ಯೆಚೂರಿ ಅವರನ್ನು ಆಗಸ್ಟ್.19ರಂದೇ ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು.
ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದೆ. ಈ ಸಮಯದಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸಿಪಿಐ ಅಧಿಕೃತ ಹೇಳಿಕೆ ನೀಡಿದೆ.
ಇನ್ನು ಸೀತಾರಾಂ ಯೆಚೂರಿ ಅವರ ಕಾಯಿಲೆಯ ಸ್ವರೂಪವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ. ಯೆಚೂರಿ ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎನ್ನಲಾಗಿದೆ.