ಕಾನ್ಪುರ: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಜೈಸ್ವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಕಿದ್ವಾಯಿ ನಗರದ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ವೈದ್ಯರು ಅವರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಜೈಸ್ವಾಲ್ ಅವರು ಪತ್ನಿ ಮಾರಾ ರಾಣಿ ಜೈಸ್ವಾಲ್, ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಹಾಗೂ ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.
ಜೈಸ್ವಾಲ್ ನಿಧನಕ್ಕೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.





