ದೇಶ- ವಿದೇಶ

ಕಾಂಗ್ರೆಸ್‌ ಹಿರಿಯ ನಾಯಕ ಶ್ರೀಪ್ರಕಾಶ್‌ ಜೈಸ್ವಾಲ್‌ ನಿಧನ

ಕಾನ್ಪುರ: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀಪ್ರಕಾಶ್‌ ಜೈಸ್ವಾಲ್‌ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಜೈಸ್ವಾಲ್‌ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಕಿದ್ವಾಯಿ ನಗರದ ನರ್ಸಿಂಗ್‌ ಹೋಂಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ವೈದ್ಯರು ಅವರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಜೈಸ್ವಾಲ್‌ ಅವರು ಪತ್ನಿ ಮಾರಾ ರಾಣಿ ಜೈಸ್ವಾಲ್‌, ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಹಾಗೂ ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.

ಜೈಸ್ವಾಲ್‌ ನಿಧನಕ್ಕೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

8 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

9 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

9 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

9 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

10 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

10 hours ago