ಮುಂಬೈ: ಇಂದು ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್ 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದೆ.
ಬಾಂಬೆ ಷೇರು ಮಾರುಕಟ್ಟೆಯಲ್ಲಿ ಗೂಳಿ ನೆಗೆತ ಮುಂದುವರಿದಿದ್ದು, ನಿನ್ನೆ 78,053,52 ಅಂಕಗಳ ದಾಖಲೆಯ ಮಟ್ಟಕ್ಕೆ ತಲುಪಿದ್ದ ಸೆನ್ಸೆಕ್ಸ್ ಇಂದು 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದ್ದು, ಹೊಸ ದಾಖಲೆ ಬರೆದಿದೆ.
ಇಂದಿನ ವಹಿವಾಟಿನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ಬ್ಲೂ ಚಿಪ್ ಮತ್ತು ಐಸಿಐಸಿಐಯ ಷೇರು ಖರೀದಿಯೊಂದಿಗೆ 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 339.51 ಪಾಯಿಂಟ್ಸ್ ಏರಿಕೆ ಕಂಡು 79,013,76ಕ್ಕೆ ತಲುಪಿದೆ.
ಅದೇ ರೀತಿ ನಿಫ್ಟಿ ಕೂಡ 97.6 ಪಾಯಿಂಟ್ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 24 ಸಾವಿರ ಗಡಿ ದಾಟಿದೆ. ಇಂದಿನ ವಹಿವಾಟು ಅಂತ್ಯಕ್ಕೆ ಸೆನ್ಸೆಕ್ಸ್ 568.93 ಅಂಕಗಳ ಸೇರ್ಪಡೆಯೊಂದಿಗೆ 79,243.18 ಅಂಕಗಳಿಗೆ ಏರಿಕೆಯಾದರೆ, ನಿಫ್ಟಿ 175.70 ಅಂಕಗಳ ಸೇರ್ಪಡೆಯೊಂದಿಗೆ 24,044.50 ಅಂಕಗಳಿಗೆ ಏರಿಕೆಯಾಗಿದೆ.
ಅಲ್ಟ್ರಾಟೆಕ್ ಸಿಮೆಂಟ್, ಜೆಎಸ್‌ಡಬ್ಲ್ಯೂ ಸ್ಟೀಲ್, ರಿಲಯನ್ಸ್ ಇಂಡಸ್ಟ್ರೀಸ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಬಜಾಜ್ ಪೈನಾನ್ಸ್, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಟಾಟಾ ಸ್ಟೀಲ್ ಅತೀ ಹೆಚ್ಚು ಲಾಭ ಗಳಿಸಿದರೆ, ಮಾರುತಿ, ಟೆಕ್ ಮಹೀಂದ್ರಾ, ಎಚ್‌ಸಿಎಲ್ ಟೆಕ್ನಾಲಜೀಸ್ ಮತ್ತು ಲಾರ್ಸನ್ ಅಂಡ್ ಟೂಬ್ರೊ ಅತೀ ಹೆಚ್ಚು ನಷ್ಟ ಅನುಭವಿಸಿವೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…