Mysore
23
broken clouds

Social Media

ಗುರುವಾರ, 13 ಮಾರ್ಚ್ 2025
Light
Dark

ರಸ್ತೆ ಅಪಘಾತದಲ್ಲಿ ಸೀರಿಯಲ್‌ ಯುವ ನಟ ದುರ್ಮರಣ

ಮುಂಬೈ: ಬೈಕ್‌ಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಟಿವಿ ಸೀರಿಯಲ್‌ ನಟ ಅಮನ್‌ ಜೈಸ್ವಾಲ್‌ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ.

ನಟ ಅಮನ್‌ ಅವರು ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಕ್ಕೆ ಹೆಸರುವಾಸಿಯಾಗಿದ್ದರು.

ಅಪಘಾತದ ಬಳಿಕ ತೀವ್ರ ಗಾಯಗೊಂಡಿದ್ದ ಅಮನ್‌ ಜೈಸ್ವಾಲ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಅಂಬೋಲಿ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಟ್ರಕ್‌ ಚಾಲಕನ ವಿರುದ್ಧ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಅಮನ್‌ ಜೈಸ್ವಾಲ್‌ ನಿಧನಕ್ಕೆ ಸೀರಿಯಲ್‌ ಹಾಗೂ ಚಲನಚಿತ್ರ ನಟರು ಕಂಬನಿ ಮಿಡಿದಿದ್ದಾರೆ.

Tags: