ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ.
ಇರಾನ್‌ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೇರಿಕಾ ಸುಮಾರು 907 ಕೆಜಿ ಬಂಕರ್ ಬಸ್ಟರ್ ಬಾಂಬ್‌ಗಳಿಂದ ದಾಳಿ ನಡೆಸಿದೆ.
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಸ್ಫೋಟದ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
ಒಂದು ದಿನದ ಹಿಂದೆಯಷ್ಟೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಎಚ್ಚರಿಕೆ ನೀಡಿದ್ದರು. ಇರಾನ್ ಒಂದು ವೇಳೆ ಯುದ್ಧ ಕೊನೆಗೊಳಿಸುವ ಒಪ್ಪಂದಕ್ಕೆ ಬರದಿದ್ದರೆ, ಆ ದೇಶದ ಇಂಧನ ಮೂಲಗಳು, ಪರಮಾಣು ಕೇಂದ್ರಗಳು ಹಾಗೂ ನೀರು ಸರಬರಾಜು ಘಟಕಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯಗಳನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು.




