Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

ಬಿಹಾರ ಚುನಾವಣೆಯಲ್ಲಿ ಹಿನ್ನಡೆ : ಸಿಎಂ ಸಿದ್ದರಾಮಯ್ಯ ಹೇಳೋದೇನು?

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತ್ತ ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ ಹಿನ್ನೆಡೆಯಾಗಿದೆ.

ಸದ್ಯ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದರು.

ಇನ್ನೂ ಮಕ್ಕಳ ದಿನಾಚರಣೆ ಬಗ್ಗೆ ಮಾತನಾಡಿ, ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರೂ ಎಂದೇ ಅವರನ್ನು ಕರೆಯಲಾಗುತ್ತಿತ್ತು ಎಂದರು.

ಇದನ್ನು ಓದಿ: Bihar Result : ಭರ್ಜರಿ ಗೆಲುವಿನತ್ತ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌

ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ದೇಶ ಪ್ರೇಮ ಹಾಗೂ ಸ್ವಾತಂತ್ರ್ಯ ಪ್ರೇಮಗಳನ್ನು ಬೆಳೆಸಿಕೊಂಡಿದ್ದರು. ಬ್ರಿಟಿಷರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಂಡು ಮಹಾತ್ಮ ಗಾಂಧಿಯವರ ನೆಚ್ಚಿನ ಶಿಷ್ಯರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. ಸುಮಾರು 9 ವರ್ಷಗಳ ಕಾಲ ಕಾರಾಗೃಹದಲ್ಲಿದ್ದು ದೇಶಕ್ಕಾಗಿ ಬಹಳಷ್ಟು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗ ದೇಶದ ಬಜೆಟ್ ಗಾತ್ರ 197 ಕೋಟಿ ರೂ. ಗಳು ಮಾತ್ರ ಇತ್ತು. ಎರಡು ಮೂರು ವರ್ಷಗಳ ನಂತರ 4 ಅಂಕಿಗಳ ಹಂತಕ್ಕೆ ತಲುಪಿತು ಎಂದರು.

ಬಿಜೆಪಿಗೆ ಗಾಂಧಿ ಹಾಗೂ ನೆಹರೂ ಅವರನ್ನು ತೆಗಳುವುದೇ ಕೆಲಸ. ಬಿಜೆಪಿಗೆ ಗಾಂಧಿ ಹಾಗೂ ನೆಹರೂ ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್.ಎಸ್.ಎಸ್ ಗಾಂಧಿ ಮತ್ತು ನೆಹರೂ ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ ಎಂದರು.

ಬಾಗಲಕೋಟೆಯಲ್ಲಿ ಕಬ್ಬಿಗೆ ಬೆಂಕಿ ಪ್ರಕರಣ : ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ
ಬಾಗಲಕೋಟೆ ಕಬ್ಬು ಬೆಳೆಗಾರರು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿ ರೈತರು ಅದಕ್ಕೆ ಕಾರಣರಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ನೀಡಿ ಚಳವಳಿಯನ್ನು ವಾಪಸ್ಸು ಪಡೆಯಬೇಕು ಎಂದು ಮನವಿ ಮಾಡಿದರು.

Tags:
error: Content is protected !!