ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತ್ತ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ ಹಿನ್ನೆಡೆಯಾಗಿದೆ.
ಸದ್ಯ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದರು.
ಇನ್ನೂ ಮಕ್ಕಳ ದಿನಾಚರಣೆ ಬಗ್ಗೆ ಮಾತನಾಡಿ, ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರೂ ಎಂದೇ ಅವರನ್ನು ಕರೆಯಲಾಗುತ್ತಿತ್ತು ಎಂದರು.
ಇದನ್ನು ಓದಿ: Bihar Result : ಭರ್ಜರಿ ಗೆಲುವಿನತ್ತ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್
ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ದೇಶ ಪ್ರೇಮ ಹಾಗೂ ಸ್ವಾತಂತ್ರ್ಯ ಪ್ರೇಮಗಳನ್ನು ಬೆಳೆಸಿಕೊಂಡಿದ್ದರು. ಬ್ರಿಟಿಷರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಂಡು ಮಹಾತ್ಮ ಗಾಂಧಿಯವರ ನೆಚ್ಚಿನ ಶಿಷ್ಯರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. ಸುಮಾರು 9 ವರ್ಷಗಳ ಕಾಲ ಕಾರಾಗೃಹದಲ್ಲಿದ್ದು ದೇಶಕ್ಕಾಗಿ ಬಹಳಷ್ಟು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗ ದೇಶದ ಬಜೆಟ್ ಗಾತ್ರ 197 ಕೋಟಿ ರೂ. ಗಳು ಮಾತ್ರ ಇತ್ತು. ಎರಡು ಮೂರು ವರ್ಷಗಳ ನಂತರ 4 ಅಂಕಿಗಳ ಹಂತಕ್ಕೆ ತಲುಪಿತು ಎಂದರು.
ಬಿಜೆಪಿಗೆ ಗಾಂಧಿ ಹಾಗೂ ನೆಹರೂ ಅವರನ್ನು ತೆಗಳುವುದೇ ಕೆಲಸ. ಬಿಜೆಪಿಗೆ ಗಾಂಧಿ ಹಾಗೂ ನೆಹರೂ ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್.ಎಸ್.ಎಸ್ ಗಾಂಧಿ ಮತ್ತು ನೆಹರೂ ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ ಎಂದರು.
ಬಾಗಲಕೋಟೆಯಲ್ಲಿ ಕಬ್ಬಿಗೆ ಬೆಂಕಿ ಪ್ರಕರಣ : ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ
ಬಾಗಲಕೋಟೆ ಕಬ್ಬು ಬೆಳೆಗಾರರು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿ ರೈತರು ಅದಕ್ಕೆ ಕಾರಣರಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ನೀಡಿ ಚಳವಳಿಯನ್ನು ವಾಪಸ್ಸು ಪಡೆಯಬೇಕು ಎಂದು ಮನವಿ ಮಾಡಿದರು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…