ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಮುಂಜಾನೆ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.
ಇಂದು ಮುಂಜಾನೆ 5.30ರ ವೇಳೆಗೆ ಚಲ್ಪಾಕ ಅರಣ್ಯದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಕೂಂಬಿಂಗ್ ಕಾರ್ಯಾಚರಣೆ ವೇಳೆ ಮಾವೋವಾದಿ ಗುಂಪನ್ನು ಗುರುತಿಸಿ ಶರಣಾಗುವಂತೆ ಆದೇಶ ನೀಡಲಾಗಿತ್ತು.
ಆದರೆ ಮಾವೋವಾದಿಗಳು ಇದ್ಯಾವುದಕ್ಕೂ ಜಗ್ಗದೇ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರು.
ಇದಕ್ಕೆ ಪ್ರತಿಯಾಗಿ ಪೊಲೀಸರು ಕೂಡ ಗುಂಡಿನ ಸುರಿಮಳೆ ಸುರಿಸಿ 7 ಮಂದಿ ಮಾವೋವಾದಿಗಳನ್ನು ಹತ್ಯೆ ಗೈದಿದ್ದಾರೆ.
ಘಟನಾ ಸ್ಥಳದಲ್ಲಿ ಅನೇಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಎರಡು ಎಕೆ 47 ರೈಫಲ್‌ಗಳು ಸೇರಿವೆ ಎಂಬ ಮಾಹಿತಿ ಲಭ್ಯವಾಗಿದೆ.
ನವೆಂಬರ್.21ರಂದು ಪೊಲೀಸ್ ಮಾಹಿತಿದಾರರೆಂದು ಶಂಕಿಸಿ ಮಾವೋವಾದಿಗಳು ಇಬ್ಬರು ಬುಡಕಟ್ಟು ಜನರನ್ನು ಹತ್ಯೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ತೆಲಂಗಾಣ ಹಾಗೂ ನಕ್ಸಲ್ ವಿರೋಧಿ ಪಡೆಗಳು ಜಂಟಿಯಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಏಳು ಮಂದಿ ಮಾವೋವಾದಿಗಳನ್ನು ಎನ್‌ಕೌಂಟರ್ ಮಾಡಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…